Skip to main content
Submitted by lokesh on ಶನಿ, 04/07/2012 - 11:26
Forums

ಪ್ರೀತಿ ಅನ್ನುವುದು ಕೂಡ ಅತ್ಯಂತ ಕಮರ್ಷಿಯಲ್. ಇವತ್ತು ಜಗತ್ತಿನಲ್ಲಿ ತಯಾರಾಗುವ ಎಲ್ಲಾ ಸಿನಿಮಾಗಳ ವಸ್ತುವೂ ಪ್ರೀತಿ. ಪ್ರೀತಿಯ ಕುರಿತ ಕತೆ,ಕಾದಂಬರಿ, ಸಿನಿಮಾ ಸಂಪಾದಿಸಿದಷ್ಟು ದುಡ್ಡನ್ನು ಯಾವ ಕಥಾವಸ್ತುವೂ ಸಂಪಾದಿಸಿಲ್ಲ. ಯಾವ ಉದ್ಯಮವೂ ಸಂಪಾದಿಸಿಲ್ಲ.
ಅಷ್ಟೇ ಅಲ್ಲ, ಮತ್ತೊಂದು ಕಾರಣಕ್ಕೂ ಪ್ರೀತಿ ಕಮರ್ಷಿಯಲ್ಲು. ಪ್ರೀತಿಸುತ್ತಲೇ ಇರುವ ಹುಡುಗಿಗೆ ಹುಡುಗನ ಆಸ್ತಿಯಲ್ಲಿ ಪಾಲಿಲ್ಲ. ಅದೇ ಮದುವೆಯಾದರೆ ಆಸ್ತಿ ಆಕೆಯದು. ಆದ್ದರಿಂದ ಪ್ರೀತಿಸಿದವರು ಮದುವೆ ಆಗಲೇಬೇಕು. ಮದುವೆ ಆದ ಮೇಲೆ ಯಥಾಪ್ರಕಾರ, ಆಸ್ತಿ, ಸಂಪತ್ತು, ಮನೆ, ಮಕ್ಕಳು, ಸಂಸಾರ,ಸ್ವಾರ್ಥ ಎಲ್ಲವೂ ಶುರುವಾಗುತ್ತದೆ. ಜಗತ್ತಿನ ಎಲ್ಲಾ ಜಗಳಗಳಿಗೂ ಕೌಟುಂಬಿಕ ಕಲಹಗಳಿಗೂ ಪ್ರೀತಿಯೇ ಮೂಲ.
ಅಷ್ಟೇ ಅಲ್ಲ, ಪ್ರೀತಿ ತೀರಾ ಸಂಕುಚಿತ. ಒಬ್ಬರನ್ನಲ್ಲದೆ ಇನ್ನೊಬ್ಬರನ್ನು ಪ್ರೀತಿಸಿದರೆ ಅಲ್ಲಿ ಹಾಹಾಕಾರ. ಇಬ್ಬರನ್ನು ಮದುವೆಯಾಗುತ್ತೇನೆ ಅಂದರೆ ರಣರಂಗ. ಮದುವೆಯಾದರೆ ಜಗತ್ತೇ ಮುಳುಗಿ ಹೋದಂತೆ, ಆಕಾಶವೇ ಕಳಚಿ ಬಿದ್ದಂತೆ ಗಾಬರಿ, ಗಲಭೆ, ಕುರುಕ್ಷೇತ್ರ. ಮೊದಲ ಹೆಂಡತಿ, ನಂತರ ಬಂದವಳನ್ನೇಕೆ ಪ್ರೀತಿಸಬಾರದು. ಇಬ್ಬರೂ ಒಬ್ಬರನ್ನೇ ಯಾಕೆ ಮೆಚ್ಚಬಾರದು. ಇಬ್ಬರಿಗೂ ಬದನೆಕಾಯಿ ಎಣ್ಣೆಗಾಯಿ ಇಷ್ಟವಾದರೆ, ಒಬ್ಬನೇ ಹುಡುಗನನ್ನು ಯಾಕೆ ಪ್ರೀತಿಸುವಂತಿಲ್ಲ.
ಅಲ್ಲಿ ಮತ್ತೆ ಆಸ್ತಿಪಾಸ್ತಿಯ ಪ್ರಶ್ನೆ ಬರುತ್ತದೆ. ಹಂಚಿಕೆಯ ಮಾತು ಬರುತ್ತದೆ. ಲೆಕ್ಕಾಚಾರ ಶುರುವಾಗುತ್ತದೆ. ಪ್ರೀತಿ ಯಾವ ಹಂತದಲ್ಲಿ ಪ್ರೀತಿಯ ಗುಣಗಳನ್ನು ಕಳೆದುಕೊಂಡು ಲೆಕ್ಕಾಚಾರ ಆಗುತ್ತದೆ ಅಂತ ಹೇಳೋದು ಕಷ್ಟ.
ಪ್ರೀತಿಸುವುದು ಅಭ್ಯಾಸ ಆಗಿಬಿಟ್ಟರೆ ಮತ್ತೂ ಅಪಾಯ. ಅಭ್ಯಾಸ ಆಗದಿದ್ದರೂ ಅಪಾಯ. ಪ್ರೀತಿಯನ್ನು ಅಂತಸ್ಪೂರ್ತಿ ಅಂದರೂ ತಪ್ಪು, ಮೂಲಗುಣ ಅನ್ನುವುದೂ ತಪ್ಪು. ಪ್ರೀತಿ ಹಸಿವೆಯ ಹಾಗೆ; ಆಗುತ್ತದೆ. ನೋವಿನ ಹಾಗೆ; ನೋಯುತ್ತದೆ. ಅಜೀರ್ಣದ ಹಾಗೆ; ಅತಿಯಾದರೆ ತೊಂದರೆ ಮಾಡುತ್ತದೆ. ಬೆಳಕಿನ ಹಾಗೆ; ಕಡಿಮೆಯಿದ್ದರೂ ಕತ್ತಲೆ, ಅತಿಯಾದರೂ ಕಣ್ಣುಕುಕ್ಕಿ ಕತ್ತಲೆ. ಹಾಗಿದ್ದರೆ ಎಂಥ ಪ್ರೀತಿ ಒಳ್ಳೇದು? ಜ್ವರದಂಥ ಪ್ರೀತಿ! ಬರಬೇಕು, ಬೆವರಿದಾಗ ಹೋಗಿಬಿಡಬೇಕು. 
 

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

ಅನಿಸಿಕೆಗಳು

SHIVARAJ YALIGAR ಶುಕ್ರ, 02/15/2013 - 12:48

Dear Lokesh, jst i read ur Article. it'z truth. plz suggest my Love. With regards, Shivaraj Yaligar http://shivarajyaligar.blogspot.in or search @ Vismayanagari.

sapna ಶನಿ, 11/05/2016 - 16:33

Prithi annondu ondu sundara kanasu loki

  • 932 views