Skip to main content

ಕಾಲ ಗರ್ಭದಲಿ....

ಇಂದ Jagannatha R N
ಬರೆದಿದ್ದುAugust 5, 2016
noಅನಿಸಿಕೆ

 

 

ಸಿಗದ ಒಲವ ಇನ್ನೆಲ್ಲೋ
ಕಾಣುವ ಜಿಜ್ಞಾಸೆ ಪ್ರತಿ ಪ್ರೇಮಿಗಳದ್ದು..
ತೊರೆದ ಕ್ಷಣಕೆ ಏನೇನೋ ಕಾರಣ
ತಾವೆ ಕಟ್ಟಿಕೊಳ್ಳುತ ,ಎಂದಿಗೂ 
ದೂಷಿಸದ ಪ್ರೇಮ ಇವರದು..
ಆದರೂ, ಇದ ಅರಿಯದೆ
ಹುಡುಗಿ ಕಳೆದುಕೊಂಡಳೊ,.?
ಸಿಗದ ಹುಡುಗ ಕಳೆದುಕೊಂಡನೊ,
ಒಟ್ಟಾರೆ ಸಿಗದಿದ್ದೆ ಜಾಸ್ತಿ ಬದುಕಲಿ...

ಊರ ತೊರೆದ ಮಗನ 
ಕಡೆವರೆಗೂ ಅದೇ ಪ್ರೀತಿಯಲಿ
ಕಾಯೋ ಕಣ್ಣು ಅಮ್ಮನದು..
ತೊರೆದ ಮಗನ ಹಿತವ ಬಯಸಿ
ನೂರಾರು ದೇವರುಗಳ ಹರಕೆ
ತೀರಿಸುತಲೇ, ಸಾಗುತಿರುವ ಬದುಕು ಅವಳದು..
ಆದರೂ ಇದ ಅರಿಯದ ಮಗ ಸಾಗುತಿರುವನೋ
ಅರಿತು ಕೂಡ ಮರೆತು ಸಾಗುತಿಹನೊ
ತಿಳಿಯದು ಬದುಕಲಿ..

ಏನೆನೋ ಹುಡುಕುವ
ಏನೆನೋ ಪಡೆದುಕೊಳ್ಳುವ ಧಾವಂತದಿ
ಕಳೆದುಕೊಳ್ಳುತಲೇ ಸಾಗುವ
ಏನೋ ಪಡೆದವೆಂದು ಹಿಗ್ಗುವ
ಲೆಕ್ಕಾಚಾರದ ಬದುಕಿಗೆ
ತಿಳಿಯದು ಸಾಗುವ ಹಾದಿಯಲಿ
ಕಳೆದುಕೊಂಡುದರ ಲೆಕ್ಕ...

ಇಳಿ ಸಂಜೆಯಲಿ ಕೂತು
ಕಳೆದುಕೊಂಡ ಒಲವಿನ ಅವಲೋಕನ..
ಗೋಡೆ ಮೇಲಿನ ಅಮ್ಮನ ಫೋಟೋ ನೋಡಿ
ಅವಳ ಬದುಕ ಸ್ಮರಿಸುವ ಆತ್ಮಾವಲೋಕನ
ಎರಡು ಶೂನ್ಯ ಕಾಲ ಗರ್ಭದಲಿ....

......ರಾಮೇನಹಳ್ಳಿ ಜಗನ್ನಾಥ

ಲೇಖಕರು

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.