Skip to main content

ಹುನಗುಂಡಿ ಗ್ರಾಮದಲ್ಲಿ ಪೂರ್ವಭಾವಿ ಸಭೆ

ಇಂದ prabhu
ಬರೆದಿದ್ದುDecember 30, 2017
noಅನಿಸಿಕೆ

ರೋಣ ತಾಲೂಕಿನ ಹುನಗುಂಡಿ ಗ್ರಾಮದಲ್ಲಿ ಜನೇವರಿ ೧೦ರಿಂದ ೧೬ ನೇ ದಿನಾಂಕದವರೆಗೆ ಹೊಳೆಆಲೂರಿನ ಶ್ರೀ ಕ.ವಿ.ಪ್ರ ಸಮಿತಿಯ ಪ್ರಥಮ ದರ್ಜೆ ಮಹಾವಿದ್ಯಾಲಯದ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರದ ನಿಮಿತ್ಯ ಶನಿವಾರ ಹುನಗುಂಡಿ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಪೂರ್ವಭಾವಿ ಸಭೆ ಜರುಗಿತು.
ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಅಮರಪ್ಪಗೌಡ ಗೌಡ್ರ, ಪಿಡಿಓ ವಿ.ಜಿ.ಮರೆಗುದ್ದಿ, ಗ್ರಾಪಂ ಕಾರ್ಯದರ್ಶಿ ಆಯ್.ವಿ.ಪತ್ತಾರ್,ಮಾಜಿ ಗ್ರಾಪಂ ಅಧ್ಯಕ್ಷ ಗಂಗಾಧರ ಮಂಡಸೊಪ್ಪಿ, ಗ್ರಾಪಂ ಸದಸ್ಯರಾದ ಶ್ರೀಮತಿ ರೇಣವ್ವ ರಾ ತಳವಾರ, ಶ್ರೀ ಎಸ್.ಬಿ ಮಂಡಸೊಪ್ಪಿ ವಕೀಲರು, ಕಾಲೇಜಿನ ಪ್ರಾಚಾರ್ಯ ಡಾ.ಎಸ್.ವಿ.ಅಂದಾನಶೆಟ್ರ, ಡಾ.ಬಿ.ಎ.ಬೆಳವಟಗಿ, ಯೋಜನಾಧಿಕಾರಿಗಳಾದ ಡಾ.ಎಸ್.ಬಿ.ಸಜ್ಜನರ್ , ಡಾ.ಪ್ರಭು.ಗಂಜಿಹಾಳ್ ಪಾಲ್ಗೊಂಡು ಹಲವಾರು ವಿಷಯಗಳನ್ನು ಚರ್ಚಿಸಿದರು.
-ಪ್ರಭು ಗಂಜಿಹಾಳ್-೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.