Skip to main content

ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಧಿಕಾರದ ಸುವರ್ಣ ಸಂಭ್ರಮಾಚರಣೆ

ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಧಿಕಾರದ ಸುವರ್ಣ ಸಂಭ್ರಮಾಚರಣೆ
ಇಂದ prabhu
ಬರೆದಿದ್ದುOctober 24, 2018
noಅನಿಸಿಕೆ

ಶ್ರೀಕ್ಷೇತ್ರ ಧರ್ಮಸ್ಠಳ ಧರ್ಮಾಧಿಕಾರಿಗಳಾದ ಪದ್ಮವಿಭೂಷಣ ಡಾ.ವೀರೇಂದ್ರ ಹೆಗ್ಗಡೆಯವರ ಪಟ್ಟಾಧಿಕಾರದ ಸುವರ್ಣ ಸಂಭ್ರಮದ ನಿಮಿತ್ಯ ದಿ.೨೪ರಂದು ಇಲ್ಲಿನ ಜ್ಞಾನಸಿಂಧು ಅಂಧ ಮಕ್ಕಳ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ದವಸಧಾನ್ಯ, ಬಟ್ಟೆ, ಸಿಹಿತಿಂಡಿ ವಿತರಣೆಯೊಂದಿಗೆ ವಿಶೇಷ ಆಚರಣೆಯನ್ನು ಮಾಡಲಾಯಿತು.
ಶ್ರೀಕ್ಷೇತ್ರ ಧರ್ಮಸ್ಠಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಗದಗ ಜಿಲ್ಲೆ ಹಾಗೂ ಡಾ.ವೀರೇಂದ್ರ ಹೆಗ್ಗಡೆಯವರ ಅಭಿಮಾನಿಗಳು ಸೇರಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ನಿವೃತ್ತ ಶಿಕ್ಷಕ ಎ.ಎನ್.ಬಡಿಗೇರ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಅಂಧ ಮಕ್ಕಳಿಂದ ಕೇಕ್ ಕತ್ತರಿಸಲಾಯಿತು. ಶ್ರೀಕ್ಷೇತ್ರ ಧರ್ಮಸ್ಠಳ ಯೋಜನೆಯ ಕಾರ್ಯ ವೈಖರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಠಳದಿಂದ ನಡೆಯುವ ಶೈಕ್ಷಣಿಕ ,ಸಾಮಾಜಿಕ್, ವೈದ್ಯಕೀಯ ,ಆಧ್ಯಾತ್ಮಿಕ ಕಾರ್ಯಕ್ರಮಗಳ ಕುರಿತು ಶ್ರೀಕ್ಷೇತ್ರ ಧರ್ಮಸ್ಠಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಾದೇಶಿಕ ನಿರ್ದೇಶಕರಾದ ಪಿ.ಗ್ಂಗಾಧರ ರೈ ವಿವರವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪ್ರೊ.ಎಚ್.ಬಿ.ಅಸೂಟಿ, ಜಿಲ್ಲಾ ನಿರ್ದೇಶಕ ಶಿವಾನಂದ ಆಚಾರ್ಯ, ಡಾ.ಎಸ್.ಬಿ.ಹಿರೇಗೌಡರ,ಡಾ.ಪ್ರಕಾಶ್ ಜಂಬಲದಿನ್ನಿ, ಎಸ್.ಡಿ.ಶೇಬನ್ನವರ, ಶಂಕರಗೌಡ ಗಿರಡ್ಡಿ, ಶಿವಣ್ಣ ಯಾವಗಲ್, ಪಾಂಡುರಂಗ ಪತ್ತಾರ್, ಮಹಾಬಳೇಶ್ ಗಾಣಿಗೇರ್, ಜಯದೇವ್ ಭಟ್, ರಾಜಣ್ಣ ಹೂಲಿ, ಶಿವಾನಂದ ಹೂಗಾರ್, ತುಳಸಮ್ಮ ಕೆಲೂರ್, ಶಿವನಂದ ಕೆಲೂರ್, ಮೇಲ್ವಿಚಾರಕರಾದ ಮಲ್ಲಿಕಾರ್ಜುನ ಮೊದಲಾದವರಿದ್ದರು.
--------
-ಡಾ.ಪ್ರಭು ಗಂಜಿಹಾಳ್-೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.