Skip to main content

ಹೊಳೆಹಡಗಲಿ ಗ್ರಾಮದಲ್ಲಿ ನಾಟಕ ಪ್ರದರ್ಶನ

ಹೊಳೆಹಡಗಲಿ ಗ್ರಾಮದಲ್ಲಿ ನಾಟಕ ಪ್ರದರ್ಶನ
ಇಂದ prabhu
ಬರೆದಿದ್ದುJanuary 8, 2019
noಅನಿಸಿಕೆ

ರೋಣ ತಾಲೂಕಿನ ಹೊಳೆಆಲೂರ ಸಮೀಪದ ಹೊಳೆಹಡಗಲಿ ಗ್ರಾಮದಲ್ಲಿ ಶ್ರೀ ಚಂದ್ರಮೌಳೀಶ್ವರ ಜಾತ್ರೆಯ ಅಂಗವಾಗಿ ಶ್ರೀ ಚಂದ್ರಮೌಳೀಶ್ವರ ಕ್ರೀಡಾ ನಾಟ್ಯ ಸಂಘದಿಂದ "ಭಂಡರಿಗೆ ಸಿಡಿದೆದ್ದ ಪುಂಡ ಹುಲಿ" ಅರ್ಥಾತ್ "ಧರ್ಮದ ದಾರಿಗೆ ದೇವರು ಯಾರು?" ಎಂಬ ಸಾಮಾಜಿಕ ನಾಟಕವನ್ನು ಪ್ರದರ್ಶಿಸಲಾಯಿತು.
ಗದಗ ಜಿಲ್ಲಾ ಬಿಜೆಪಿ ಎಸ್ ಟಿ ಮೋರ್ಚಾದ ಮಾಜಿ ಅಧ್ಯಾಕ್ಷ ಬಸವಂತಪ್ಪ ತಳವಾರ್ ರಿಬ್ಬನ್ ಕತ್ತರಿಸುವ ಮೂಲಕ ಪ್ರದರ್ಶನಕ್ಕೆ ಚಾಲನೆ ನೀಡಿದರು. ಸಾನಿಧ್ಯವನ್ನು ಶ್ರೀ ಶಿವಪೂಜ ಶಿವಾಚಾರ್ಯ ಸ್ವಾಮಿಗಳು ಹಿರೇಮಠ ವಹಿಸಿದ್ದರು.ವೇದಿಕೆಯ ಮೇಲೆ ವಿ.ಎಸ್.ಪಾಟೀಲ, ಎ.ಬಿ.ಪಾಟೀಲ,ಅವ್ವಣ್ಣಾವರ, ಎನ್. ಆರ್.ದಂಡಿನ, ಎಂ.ಎಂ.ಪಡಿಯಪ್ಪನವರ,ಎಂ.ಪಿ.ಹೊಸಮನಿ ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು.ನಂತರ ನಾಟಕ ಪ್ರದರ್ಶನ ಜರುಗಿತು.
*ಪ್ರಭು ಅ ಗಂಜಿಹಾಳ
ಮೊ:೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.