Skip to main content

ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ

ಹುತಾತ್ಮ ವೀರ ಯೋಧರಿಗೆ ಶ್ರದ್ಧಾಂಜಲಿ
ಇಂದ prabhu
ಬರೆದಿದ್ದುFebruary 16, 2019
noಅನಿಸಿಕೆ

ಭಾರತ ಮಾತೆಯ ರಕ್ಷಣೆಗಾಗಿ ಭಾರತದ ಗಡಿಯನ್ನು ಕಾಯುತ್ತಿರುವ ನಮ್ಮ ಹೆಮ್ಮೆಯ ಸೈನಿಕರ ಮೇಲೆ ಪುಲ್ವಾಮದಲ್ಲಿ ನಡೆದ ಬಾಂಬ್ ದಾಳಿಯಿಂದ ಹುತಾತ್ಮರಾದ ವೀರ ಯೋಧರ ಘನೆಯನ್ನು ಖಂಡಿಸಿ ಗದಗ ಜಿಲ್ಲೆಯ ರೋಣ ತಾಲೂಕಿನ ಬಿ.ಎಸ್.ಬೇಲೇರಿ ಗ್ರಾಮದಲ್ಲಿ ದಿ.೧೫-೨-೨೦೧೯ ರ ಶುಕ್ರವಾರ ಸಂಜೆ ಮೊಂಬತ್ತಿ ಬೆಳಗಿಸುವ ಮೂಲಕ ಶ್ರದ್ಧಂಜಲಿಯನ್ನು ಅರ್ಪಿಸಲಾಯಿತು.
ಗ್ರಾಮದ ಸುಖಮುನೇಶ್ವರ ಮಂಟಪದಲ್ಲಿ ಗ್ರಾಮೀಣ ಅಭಿವೃದ್ಧಿ ಪಂಚಾಯತರಾಜ್ ಇಲಾಖೆ,ಎನ್ ಎಸ್ ಎಸ್ ಕೋಶ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಜಿಲ್ಲಾ ಪಂಚಾಯತ ಗದಗ, ತಾಲೂಕ ಪಂಚಾಯತ ರೋಣ , ಗ್ರಾಮ ಪಂಚಾಯತ ಅಮರಗೋಳ ಹಾಗೂ ಶ್ರೀ ಕವಿಪ್ರ ಸಮಿತಿಯ ಕಲಾ ವಿಜ್ಞಾನ ವಾಣಿಜ್ಯ ಪ್ರಥಮದರ್ಜೆ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಹೊಳೆಆಲೂರ ನ ಎನ್ ಎಸ್ ಎಸ್ ಘಟಕ ೧ ಮತ್ತು ೨ ರ ವಾರ್ಷಿಕ ವಿಶೇಷ ಶಿಬಿರದಲ್ಲಿ ಶ್ರದ್ಧಾಂಜಲಿ ಸಲ್ಲಿಸಿ ನಮ್ಮ ಹೆಮ್ಮೆಯ ಸೈನಿಕರ ಜೊತೆ ದೇಶ ಇದೆ ಎಂಬ ಧ್ಯೇಯದೊಂದಿಗೆ ವೀರ ಮರಣವನ್ನು ಅಪ್ಪಿದ ಸೈನಿಕರ ಆತ್ಮಕ್ಕೆ ಚಿರಶಾಂತಿಯನ್ನು ಆ ಭಗವಂತ ಕರುಣಿಸಲಿ ಹಾಗೆಯೆ ಅವರ ಕುಟುಂಬಕ್ಕೆ ದು:ಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಎರಡು ನಿಮಿಷಗಳ ಮೌನವನ್ನು ಆಚರಿಸಲಾಯಿತು. ಪ್ರೊ.ವಿ.ಪಿ. ಪಾಟೀಲ ಘಟನೆಯ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಎನ್ ಎಸ್ ಎಸ್ ಯೋಜನಾಧಿಕಾರಿಗಳಾದ ಡಾ.ಎಸ್.ಬಿ.ಸಜ್ಜನರ, ಡಾ.ಪ್ರಭು ಗಂಜಿಹಾಳ, ಇತಿಹಾಸ ಪ್ರಾಧ್ಯಾಪಕ ಡಾ.ಎಂ.ಎನ್.ಕಡಪಟ್ಟಿ, ಪ್ರೊ.ಮಲ್ಲಿಕಾರ್ಜುನ ಬೇವೂರ್,ಪ್ರೊ.ರೇಶ್ಮಾ ಟಕ್ಕೇದ, ಪ್ರೊ.ಎಸ್.ವಾಯ್.ಪೂಜಾರ ಹಾಗೂ ಗ್ರಾಮದ ಗುರುಹಿರಿಯರು ,ಎನ್ ಎಸ್ ಎಸ್ ಸ್ವಯಂಸೇವಕರು ,ಮಹಾವಿದ್ಯಾಲಯದ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
ವರದಿ: ಪ್ರಭು ಗಂಜಿಹಾಳ
ಮೊ:೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.