Skip to main content

ಹೊಳೆಆಲೂರ: ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಹೊಳೆಆಲೂರ: ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ
ಇಂದ prabhu
ಬರೆದಿದ್ದುSeptember 25, 2019
noಅನಿಸಿಕೆ

ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಕಲಾ ವಿಜ್ಞಾನ ,ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ಎನ್ ಎಸ್ ಎಸ್ ಘಟಕ ೧ ಮತ್ತು ೨ರ ಸಹಯೋಗದಲ್ಲಿ ದಿ.೨೪-೯-೨೦೧೯ರಂದು ಎನ್ ಎಸ್ ಎಸ್ ದಿನಾಚರಣೆ ಅಂಗವಾಗಿ ಬಿ.ಕಾಂ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳ ವಿತರಣೆ ಕಾರ್ಯಕ್ರಮ ಜರುಗಿತು.
ಮಹಾವಿದ್ಯಾಲಯದ ಬೇಸಿಕ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಗದಗ ಕೆ ಎಸ್ ಎಸ್ ಪದವಿ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾದ್ಯಾಪಕರು,ಲೇಖಕರಾದ ಪ್ರೊ.ಎಂ.ಸಿ.ವಗ್ಗಿ ಆಗಮಿಸಿದ್ದರು. ಈ ಸಂದರ್ಭದಲ್ಲಿ ತಾವು ರಚಿಸಿದ ಕಾಸ್ಟ ಅಕೌಂಟಿಂಗ್ ಪುಸ್ತಕಗಳನ್ನು ನೆರೆಪೀಡಿತ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಿ ಮಾತನಾಡಿದ ಅವರು ಮಲಪ್ರಭಾ ನೆರೆಯಿಂದಾಗಿ ತಮ್ಮಗ್ರಾಮಗಳೆಲ್ಲ ಹಾನಿಗೀಡಾಗಿದ್ದು ತುಂಬಲಾಗದ ಹಾನಿಯಾಗಿದೆ. ಅದೆಲ್ಲವನ್ನೂ ತೊಡೆದು ಹಾಕಿ ಮತ್ತೆ ಹೊಸ ಬದುಕು ಕಟ್ಟಿಕೊಳ್ಳಬೇಕಾಗಿದೆ. ನೋವಲ್ಲಿ ನಲುಗದೆ ನಿಮ್ಮ ಜೀವನ ಅರಳಿಸಿಕೊಳ್ಳಲು ಸ್ವಲ್ಪ ಸಹಾಯವಾಗಲೆಂಬ ದೃಷ್ಠಿಯಿಂದ ಪುಸ್ತಕಗಳನ್ನು ನೀಡುತ್ತಿರುವೆ ಎಂದರು .ಈ ಸಂದರ್ಭದಲ್ಲಿ ವಿದ್ಯರ್ಥಿನಿಯರಾದ ಕಾಶಮ್ಮ ಹಟ್ಟಿ, ವಿಜಯಲಕ್ಷ್ಮೀ ಸಬರದ ಅಭಿಪ್ರಾಯಗಳನ್ನು ಹಂಚಿಕೊಂಡರು. ಅಧ್ಯಕ್ಷತೆಯನ್ನು ಪ್ರೊ.ಎನ್.ಎಸ್.ಹುಣಶೀಕಟ್ಟಿ ವಹಿಸಿದ್ದರು. ಪ್ರಾಸ್ತಾವಿಕವಾಗಿ ಪ್ರೊ.ಆರ್.ಎಸ್.ಪಾಟೀಲ ಮಾತನಾಡಿ ಪ್ರಸ್ತುತ ಹೊಳೆಆಲೂರ ಸುತ್ತಮುತ್ತ ಗ್ರಾಮಗಳು ನೆರೆಗೆ ತುತ್ತಾಗಿ ನಮ್ಮ ಮಹಾವಿದ್ಯಾಲಯದಲ್ಲಿ ಓದುತ್ತಿರುವ ಶೇ.೯೯ರಷ್ಟು ವಿದ್ಯಾರ್ಥಿಗಳು ಅಧ್ಯಯನ ಸಾಮಗ್ರಿಗಳನ್ನು ಕಳೆದುಕೊಂಡಿದ್ದಾರೆ ಎಂದರು. ಎನ್.ಎಸ್.ಎಸ್ ಯೋಜನಾಧಿಕಾರಿ ಡಾ.ಎಸ್.ಬಿ.ಸಜ್ಜನರ ಎನ್ ಎಸ್ ಎಸ್ ದಿನಚರಣೆ ಕುರಿತು ಮಾತನಾಡಿದರು. ಕು.ಶಿಲ್ಪಾ ಮೇಗೂರ್ ಪ್ರಾರ್ಥಿಸಿದಳು. ಪ್ರೊ.ಪಿ.ಆರ್.ಸದುಗೋಳ ಸ್ವಾಗತಿಸಿದರು. ಎನ್ ಎಸ್ ಎಸ್ ಯೋಜನಾಧಿಕಾರಿ ಡಾ.ಪ್ರಭು ಗಂಜಿಹಾಳ ವಂದಿಸಿದರು. ಯಚ್ಚರಪ್ಪ ಯಲಿಗಾರ ನಿರೂಪಿಸಿದರು.ಕಾರ್ಯಕ್ರಾಮದಲ್ಲಿ ಎನ್ ಎಸ್ ಎಸ್ ಸ್ವಯಂಸೇವಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
-ವರದಿ: ಡಾ.ಪ್ರಭು ಅ ಗಂಜಿಹಾಳ
ಮೊ:೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.