Skip to main content

ಹೊಳೆಆಲೂರಲ್ಲಿ ೧೧ರಿಂದ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ

ಹೊಳೆಆಲೂರಲ್ಲಿ ೧೧ರಿಂದ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ
ಇಂದ prabhu
ಬರೆದಿದ್ದುOctober 6, 2019
noಅನಿಸಿಕೆ

ಕರ್ನಾಟಕ ವಿಶ್ವವಿದ್ಯಾಲಯ ಗದಗ ಜಿಲ್ಲಾ ವಲಯ ಮಟ್ಟದ ಯುವಜನೋತ್ಸವ-೨೦೧೯ ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಕಲಾ ವಿಜ್ಞಾನ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಆಶ್ರಯದಲ್ಲಿ ಇದೆ ೧೧-೧೦-೨೦೧೯ ರಿಂದ ೧೨-೧೦-೨೦೧೯ರವರೆಗೆ ನಡೆಯಲಿದೆ.
ಈ ಕುರಿತು ಮಹಾವಿದ್ಯಾಲಯದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಪ್ರಾಚಾರ್ಯ ಡಾ.ಎಸ್.ವಿ.ಅಂದಾನಶೆಟ್ರ ತಿಳಿಸಿದರು.ಜಿಲ್ಲೆಯ ಸುಮಾರು ೬೦ ಕಾಲೇಜುಗಳ ೨೦೦೦ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ವಿವಿಧ ಸ್ಪರ್ಧೆಗಳು ನಡೆಯಲಿದ್ದು ಈಗಾಗಲೆ ವೇದಿಕೆ ಸಿದ್ದಗೊಳಿಸಲಾಗುತ್ತಿದೆ. ನೆರೆಯಿಂದಾಗಿ ಸ್ವಲ್ಪ ಅಡೆತಡೆಯಾಗಿದೆಯಾದರೂ ಎಲ್ಲ ವ್ಯವಸ್ಥೆಗಳನ್ನು ನಮ್ಮ ಸಿಬ್ಬಂದಿವರ್ಗ ಮಾಡುತ್ತಿದೆ ಎಂದರು. ಡಾ.ಬಿ.ಎ.ಬೆಳವಟಗಿ ಮಾತನಾಡಿ ಕಳೆದ ವರ್ಷದಂತೆ ಈ ವರ್ಷವೂ ನಮ್ಮ ಮಹಾವಿದ್ಯಾಲಯದಲ್ಲೆ ಯುವಜನೋತ್ಸವ ನಡೆಯುತ್ತಿದ್ದು ಈ ಸಲವೂ ಮಾದ್ಯಮಗಳವರು ಪ್ರೋತ್ಸಾಹ ನೀಡಬೇಕು ಎಂದು ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿದರು.ಸಾಂಸ್ಕೃತಿಕ ವಿಭಾಗದ ಚೇರ್ಮನ್ ಡಾ.ಎಸ್.ಎಸ್.ಹುರಕಡ್ಲಿ ೨೭ ವಿಧದ ಸ್ಪರ್ಧೆಗಳ ಕುರಿತು ವಿವರಿಸಿದರು.ಡಾ.ಪ್ರಭು ಗಂಜಿಹಾಳ ಸ್ವಾಗತಿಸಿದರು.ಡಾ.ಎಸ್.ಬಿ.ಸಜ್ಜನರ ಕೊನೆಗೆ ವಂದಿಸಿದರು. ಸುದ್ದಿಗೋಷ್ಟಿಯಲ್ಲಿ ಪ್ರೊ.ಜಿ.ಪಿ.ಚಕ್ರಸಾಲಿ, ಡಾ.ಪಿ.ಎಸ್.ಕಣವಿ , ಅಧೀಕ್ಷಕ ಎಂ.ವಿ.ಪಾಟೀಲ ಉಪಸ್ಥಿತರಿದ್ದರು.
-ಡಾ.ಪ್ರಭು ಅ. ಗಂಜಿಹಾಳ
ಮೊ: ೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.