Skip to main content

ರಾಮದೇವ್ ತೆರವು: ಕೇಂದ್ರಕ್ಕೆ ಕೋರ್ಟ್ ನೋಟಿಸ್

ಬರೆದಿದ್ದುJune 6, 2011
noಅನಿಸಿಕೆ

ನವದೆಹಲಿ, (ಪಿಟಿಐ) ಇಲ್ಲಿನ ರಾಮಲೀಲಾ ಮೈದಾನದಲ್ಲಿ ಉಪವಾಸ ಮುಷ್ಕರ ನಡೆಸುತ್ತಿದ್ದ  ಯೋಗಗುರು ಬಾಬಾ ರಾಮ್ ದೇವ್ ಮತ್ತು ಅವರ ಬೆಂಬಲಿಗರನ್ನು ಬಲವಂತವಾಗಿ ಅಲ್ಲಿಂದ ತೆರವು ಮಾಡಿರುವ ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ತಾನೆ ಪ್ರಕರಣ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್, ಈ ಸಂಬಂಧ ಸೋಮವಾರ ಕೇಂದ್ರ ಸರ್ಕಾರದ  ಸ್ಪಷ್ಟನೆ ಕೇಳಿದೆ.   ಘಟನೆಯ ಕುರಿತು ಎರಡು ವಾರಗಳೊಳಗೆ ವಿವರಣೆ ನೀಡುವಂತೆ ರಜಾಕಾಲದ ಸುಪ್ರೀಂ ಕೋರ್ಟ್ ನ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳಾದ  ಬಿ.ಎಸ್. ಚೌಹಾಣ್ ಮತ್ತು ಸ್ವತಂತ್ರಕುಮಾರ್  ಅವರು ಕೇಂದ್ರದ ಗೃಹಖಾತೆ  ಕಾರ್ಯದರ್ಶಿ, ದೆಹಲಿ ಆಡಳಿತದ ಮುಖ್ಯ ಕಾರ್ಯದರ್ಶಿ  ಮತ್ತು ದೆಹಲಿ ಪೊಲೀಸ್ ಆಯುಕ್ತರಿಗೆ ನೋಟಿಸ್ ಜಾರಿ ಮಾಡಿದೆ.ರಾಮಲೀಲಾ ಮೈದಾನದಿಂದ ಮುಷ್ಕರ ನಿರತ ಜನರನ್ನು ಮಧ್ಯ ರಾತ್ರಿ ಬಲವಂತದಿಂದ ಚದುರಿಸಲು ಕಾರಣವಾದ ಪರಿಸ್ಥಿತಿಯ ಕುರಿತು ವಿವರಣೆ ನೀಡುವಂತೆ ನೋಟಿಸ್ ನಲ್ಲಿ ಹೇಳಲಾಗಿದೆ. ನ್ಯಾಯಾಲಯ ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ ಎರಡನೇ ವಾರಕ್ಕೆ ನಿಗದಿಪಡಿಸಿದೆ. 

ಲೇಖಕರು

ಉಮಾಶಂಕರ ಬಿ.ಎಸ್

ಕಾಡುವ ಮನದ ಕನವರಿಕೆಗಳು.....

ಪೂರ್ತಿ ಕಪ್ಪಗೆ, ಸರಾಸರಿ ಎತ್ತರ, ನೋಡಿದ ಕೂಡಲೆ ಕಾಣುವ ಬಿಳಿ ಹಲ್ಲು, ನೀಟಾಗಿ ಬಾಚಿದ ಕೂದಲು, ವಟಗುಟ್ಟುವ ಕಪ್ಪೆ ಹಾಗೆ ಮಾತನಾಡುವವರು ಯಾರಾದರು ಎದುರು ಬಂದರೆ ಅದು ಖಂಡಿತ ನಾನೇ ಆಗಿರುತ್ತೇನೆ

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.