ಪ್ರೀತಿಸಿದವರು ಮದುವೆ ಆಗಲೇಬೇಕು
ಪ್ರೀತಿ ಅನ್ನುವುದು ಕೂಡ ಅತ್ಯಂತ ಕಮರ್ಷಿಯಲ್. ಇವತ್ತು ಜಗತ್ತಿನಲ್ಲಿ ತಯಾರಾಗುವ ಎಲ್ಲಾ ಸಿನಿಮಾಗಳ ವಸ್ತುವೂ ಪ್ರೀತಿ. ಪ್ರೀತಿಯ ಕುರಿತ ಕತೆ,ಕಾದಂಬರಿ, ಸಿನಿಮಾ ಸಂಪಾದಿಸಿದಷ್ಟು ದುಡ್ಡನ್ನು ಯಾವ ಕಥಾವಸ್ತುವೂ ಸಂಪಾದಿಸಿಲ್ಲ. ಯಾವ ಉದ್ಯಮವೂ ಸಂಪಾದಿಸಿಲ್ಲ.
ಅಷ್ಟೇ ಅಲ್ಲ, ಮತ್ತೊಂದು ಕಾರಣಕ್ಕೂ ಪ್ರೀತಿ ಕಮರ್ಷಿಯಲ್ಲು. ಪ್ರೀತಿಸುತ್ತಲೇ ಇರುವ ಹುಡುಗಿಗೆ ಹುಡುಗನ ಆಸ್ತಿಯಲ್ಲಿ ಪಾಲಿಲ್ಲ. ಅದೇ ಮದುವೆಯಾದರೆ ಆಸ್ತಿ ಆಕೆಯದು. ಆದ್ದರಿಂದ ಪ್ರೀತಿಸಿದವರು ಮದುವೆ ಆಗಲೇಬೇಕು. ಮದುವೆ ಆದ ಮೇಲೆ ಯಥಾಪ್ರಕಾರ, ಆಸ್ತಿ, ಸಂಪತ್ತು, ಮನೆ, ಮಕ್ಕಳು, ಸಂಸಾರ,ಸ್ವಾರ್ಥ ಎಲ್ಲವೂ ಶುರುವಾಗುತ್ತದೆ. ಜಗತ್ತಿನ ಎಲ್ಲಾ ಜಗಳಗಳಿಗೂ ಕೌಟುಂಬಿಕ ಕಲಹಗಳಿಗೂ ಪ್ರೀತಿಯೇ ಮೂಲ.